ಪಲಿಮಾರು : ಹೊೖಗೆ ಫ್ರೆಂಡ್ಸ್ - 11ನೇ ವಾರ್ಷಿಕೋತ್ಸವ ಸಂಪನ್ನ
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ) ಪಲಿಮಾರು ಸಂಸ್ಥೆಯ 11ನೇ ವಾರ್ಷಿಕೋತ್ಸವವು ಶುಕ್ರವಾರದಂದು ಪಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಜರಗಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು.
ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸರ್ವ ಜನ ಸುಖಿನೋ ಭವತು ಎಂಬ ತತ್ವದಲ್ಲಿ ಕಾರ್ಯ ನಿರ್ವಹಿಸುವ ಈ ಸಂಸ್ಥೆಯ ಕಾರ್ಯವೈಖರಿ ಆದರ್ಶ ಸಮಾಜ ನಿರ್ಮಾಣ ಮಾಡುವಂತ ಒಂದು ಮಾದರಿ ಸಂಸ್ಥೆ ಎಂದರು.
ಸನ್ಮಾನ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಈಶ್ವರ್ ಮಲ್ಪೆ, ನಿವೃತ್ತ ಶಿಕ್ಷಕರಾದ ಜೋನ್ ವಿ ಡಿಸೋಜ, ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತ ರಾದ ಮ್ಯಾಕ್ಸಿಂ ಡಿಸೋಜಾರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಸಮಾಜ ಸೇವಕರಾದ ದಿನೇಶ್ ಗುಜರನ್, ಬಿಲ್ಲವರ ಅಸೋಸಿಯೇಷನ್ ನ ಜೊತೆ ಕಾರ್ಯದರ್ಶಿ ರವಿ ಎಸ್ ಸನಿಲ್, ವಿಶ್ವನಾಥ ಶೆಟ್ಟಿ ಕರ್ನಿರೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ದಿನೇಶ್ ಕೋಟ್ಯಾನ್, ಸಂಸ್ಥೆಯ ಗೌರವಾಧ್ಯಕ್ಷರಾದ ಗೋಕುಲ್ ಪಲಿಮಾರು, ಅಧ್ಯಕ್ಷರಾದ ರಿತೇಶ್ ದೇವಾಡಿಗ, ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು ಉಪಸ್ಥಿತರಿದ್ದರು.
ಸಚಿನ್ ಪೂಜಾರಿ ಸ್ವಾಗತಿಸಿದರು. ರಾಘವೇಂದ್ರ ಜೆ ಸುವರ್ಣ ವರದಿ ವಾಚಿಸಿದರು. ಸಂತೋಷ್ ದೇವಾಡಿಗ , ಸಂಪತ್ ಕುಮಾರ್ ಸನ್ಮಾನ ಪತ್ರ ವಾಚಿಸಿದರು. ದೇವಿಪ್ರಸಾದ್ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸತೀಶ್ ಕುಮಾರ್ ವಂದಿಸಿದರು.
