ಹೇರೂರಿನಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೇರೂರು ಒಕ್ಕೂಟದ ಆಶ್ರಯದಲ್ಲಿ ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸಹಭಾಗಿತ್ವದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಮಾಡುವ ಕಾರ್ಯಕ್ರಮ ಹೇರೂರು ಭಜನಾ ಮಂಡಳಿಯ ವಠಾರದಲ್ಲಿ ನಡೆಯಿತು.
ಭಜನಾ ಮಂಡಳಿಯ ಅಧ್ಯಕ್ಷರಾದ ಸುಜಿತ್ ಕುಮಾರ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಕೃಷಿ ಅಧಿಕಾರಿ ಶ್ರೀ ರಾಘವೇಂದ್ರ ಆಚಾರ್ಯ ಪರಿಸರದ ಬಗ್ಗೆ ಮಾಹಿತಿ ನೀಡಿದರು.
ಉಡುಪಿ ತಾಲೂಕು ಯೋಜನಾಧಿಕಾರಿ ಶ್ರೀ ರೋಹಿತ್ ಮಜೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಗಣೇಶ್ ಶೆಟ್ಟಿ ಶುಭ ಹಾರೈಸಿದರು.
ಹೇರೂರು ಒಕ್ಕೂಟದ ಅಧ್ಯಕ್ಷರಾದ ಶ್ರೀ ದಿನೇಶ್ ದೇವಾಡಿಗ ರವರು ಶಿರ್ವ ವಲಯದ ಮೇಲ್ವಿಚಾರಕರಾದ ಶ್ರೀಮತಿ ಪಲ್ಲವಿ ಶೆಟ್ಟಿ ಸೇವಾ ಪ್ರತಿನಿಧಿ ಶ್ರೀಮತಿ ವಸಂತಿ ಆಚಾರ್ಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು ಭಜನಾ ಮಂಡಳಿಯ ಬಳಿ ಗಿಡಗಳನ್ನು ನೆಡಲಾಯಿತು ಆಗಮಿಸಿದ ಸದಸ್ಯರಿಗೆ ವಿವಿಧ ಗಿಡಗಳನ್ನು ನೀಡಲಾಯಿತು
