ಪಲಿಮಾರು : ಸರ್ಕಾರಿ ಪದವಿ ಪೂರ್ವ ಕಾಲೇಜು - ಬೀಳ್ಕೊಡುಗೆ ಸಮಾರಂಭ
ಪಲಿಮಾರು : ಇಲ್ಲಿನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಬ್ಬರು ಮುಂಬಡ್ತಿ ಪಡೆದ ನಿಮಿತ್ತ ಗೌರವ ಸನ್ಮಾನ ಕಾರ್ಯಕ್ರಮ ಜರಗಿತು.
ಹಿರಿಯ ಸಹಶಿಕ್ಷಕಿ ಸುನಿತಾ ಇವರು ಸರ್ಕಾರಿ ಪ್ರೌಢಶಾಲೆ ಮೂಳೂರು ಮತ್ತು ಇನ್ನೋರ್ವ ಸಹಶಿಕ್ಷಕರಾದ ಪ್ರಸನ್ನ ಇವರು ಸರ್ಕಾರಿ ಪ್ರೌಢಶಾಲೆ ಮೂಡುಶೆಡ್ಡೆ, ಮಂಗಳೂರು ಇಲ್ಲಿಗೆ ಮುಂಬಡ್ತಿ ಪಡೆದು ಮುಖ್ಯ ಶಿಕ್ಷಕರಾಗಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶೋಭಾ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಗ್ರಾಮ ಪಂಚಾಯತಿಯ ನಿಕಟ ಪೂರ್ವ ಅಧ್ಯಕ್ಷರಾದ ಗಾಯತ್ರಿ ಡಿ.ಪ್ರಭು, ಸದಸ್ಯರಾದ ಸುಜಾತ, ಬೆಳಪು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಆಶಾ ಕೆ.ಉಪಸ್ಥಿತರಿದ್ದರು.
ವಿದ್ಯಾರ್ಥಿ ಪ್ರತಿನಿಧಿಗಳಾದ ಲಾವಣ್ಯ, ಯಶಸ್, ಅಮ್ರೀನ ಮತ್ತು ರಿಫಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕನ್ನಡ ಉಪನ್ಯಾಸಕರಾದ ಜ್ಯೋತಿ, ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಅಭಿನಂದನಾ ನುಡಿಗಳನ್ನಾಡಿದರು.
ಪ್ರೌಢಶಾಲಾ ಹಿರಿಯ ಸಹಶಿಕ್ಷಕರಾದ ಶಿವಾನಂದ ಸ್ವಾಗತಿಸಿದರು. ಕನ್ನಡ ಶಿಕ್ಷಕರಾದ ಪಿಲಾರು ಸುಧಾಕರ್ ಶೆಣೈ ಕಾರ್ಯಕ್ರಮ ನಿರೂಪಿಸಿದರು.
