ಉಚ್ಚಿಲ ಬಡಾ ಗ್ರಾ.ಪಂ. : ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ
ಉಚ್ಚಿಲ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಡಾ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮವನ್ನು ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ಉದ್ಘಾಟಿಸಿದರು.
ಮಹಿಳೆಯರ ಋತು ಸ್ರಾವದ ಬಗ್ಗೆ ಹಾಗೂ ಕಿಶೋರಿಯರ ಆರೋಗ್ಯದ ಬಗ್ಗೆ ಪಡುಬಿದ್ರಿ ಪ್ರಾಥಮಿಕ ಕೇಂದ್ರದ ಆರೋಗ್ಯಾಧಿಕಾರಿ ಶಾಮಲಾ ಶೆಟ್ಟಿ ಮಾಹಿತಿ ನೀಡಿದರು.
ಪೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳ ರಕ್ಷಣಾ ಘಟಕದ ಕಪಿಲಾರವರು ವಿವರಿಸಿದರು.
ಸಿಎಚ್ಓ ಉಷ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ನೆನಪಿಗಾಗಿ ಗಿಡವೊಂದನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಒ ಸತೀಶ್, ಮಾಜಿ ಉಪಾಧ್ಯಕ್ಷೆ ಶಕುಂತಲಾ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಯುಸಿ ಶೇಖಬ್ಬ, ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳ ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೈಲ ಸ್ವಾಗತಿಸಿ, ಪ್ರಸ್ತಾವಿಸಿದರು. ಅಂಗನವಾಡಿ ಕಾರ್ಯಕರ್ತೆ ಶಶಿಕಕಲಾ ನವೀನ್ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ವಂದಿಸಿದರು.
