ಉಚ್ಚಿಲ : ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾದ ನಿಧಿ ಟಿ. ಶೆಟ್ಟಿ
Thumbnail
ಉಚ್ಚಿಲ : ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾಪು ತಾಲೂಕಿನ ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಧಿ ಟಿ. ಶೆಟ್ಟಿಯವರು ತುಳು ಭಾಷಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ ಬಹುಮಾನ ಪಡೆದಿದ್ದಾರೆ. ಧಾರವಾಡದ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜನತಾ ಶಿಕ್ಷಣ ಸಮಿತಿ ಸಹಯೋಗದಲ್ಲಿ ಗುರುವಾರ ಮತ್ತು ಶುಕ್ರವಾರ ಸನ್ನಿಧಿ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ನಡೆದಿದ್ದು, ಕುಮಾರಿ ನಿಧಿ ಶೆಟ್ಟಿ ತುಳು ಭಾಷಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಕುಮಾರಿ ನಿಧಿ ಶೆಟ್ಟಿಯವರನ್ನು ಶಾಲಾ ಆಡಳಿತ ಮಂಡಳಿ ಮೊಗವೀರ ಹಿತ ಸಾಧನ ವೇದಿಕೆ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ನಿಧಿ ಶೆಟ್ಟಿಯವರು ಕುಂಜೂರು ಕಿನ್ನೋಡಿ ಗುತ್ತು ತಿಮ್ಮಪ್ಪ ಶೆಟ್ಟಿ ಮತ್ತು ಶಾಂತ ಶೆಟ್ಟಿ, ದಂಪತಿಯ ಪುತ್ರಿ.
10 Feb 2024, 04:34 PM
Category: Kaup
Tags: