ಫೆಬ್ರವರಿ 20 : ಕಾಪುವಿನಲ್ಲಿ ಆನಂದ ಲಹರಿ ಮಹಾ ಸತ್ಸಂಗ
ಕಾಪು : ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಜೀವನ ಕಲೆ ಹಾಗೂ ಸುದರ್ಶನ ಕ್ರಿಯಾಯೋಗದ ಸ್ಥಾಪಕಾಚಾರ್ಯ, ಅಂತರಾಷ್ಟ್ರೀಯ ಖ್ಯಾತಿಯ ಪದ್ಮವಿಭೂಷಣ ಶ್ರೀ ರವಿಶಂಕರ್ ಗುರೂಜಿ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಫೆಬ್ರವರಿ 20, ಮಂಗಳವಾರದಂದು ಸಂಜೆ 5 ಗಂಟೆಗೆ ಕಾಪು ಸಮುದ್ರ ಕಿನಾರೆಯಲ್ಲಿರುವ ಮಂಥನ ರೆಸಾರ್ಟ್ ಬಳಿ ನಡೆಯಲಿರುವ ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಅವರು ಶನಿವಾರ ಮಂಥನ ರೆಸಾರ್ಟ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾನಸಿಕ ಒತ್ತಡ, ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಾನವತಾವಾದಿ ಹಾಗೂ ಶಾಂತಿದೂತ ಶ್ರೀ ರವಿಶಂಕರ್ ಗುರೂಜಿ ಅವರ ಮಹಾ ಸತ್ಸಂಗವನ್ನು ಆಯೋಜಿಸಿರುತ್ತೇವೆ.
ಜೀವನಕಲಾ ಸಂಸ್ಥೆಯ ಕಾರ್ಯಕ್ರಮಗಳು ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದು ಇಡೀ ಜಗತ್ತಿನಲ್ಲಿ ಲಾಭರಹಿತವಾದ ಶೈಕ್ಷಣಿಕ, ಮಾನವೀಯ ಮೌಲ್ಯಗಳುಳ್ಳ ಪ್ರಮುಖ ಸಂಸ್ಥೆಯಾಗಿದೆ.
ಉಡುಪಿ ಜಿಲ್ಲೆಗೆ ಬಂದು ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಿ ಜ್ಞಾನ, ಧ್ಯಾನ ಹಾಗೂ ಗಾನದ ಸವಿಯನ್ನು ನೀಡಲಿದ್ದಾರೆ. ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.
ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ
ಆಟ್೯ ಆಫ್ ಲಿವಿಂಗ್ ಶಿಕ್ಷಕರಾದ
ರಾಧಾ ಶೆಣೈ, ದಿನೇಶ್ ಕಾಮತ್, ವಸಂತ್ ಕುಮಾರ್, ಪ್ರಶಾಂತ್ ಪೈ, ವಿಮಲಾಕ್ಷಿ ದಿವಾಕರ್, ಶೈಲಜ ಮತ್ತಿತರರು ಉಪಸ್ಥಿತರಿದ್ದರು.
