ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ
Thumbnail
ಕಾಪು : ತಾಲೂಕಿನ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಇದಕ್ಕೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಈತ ಪಡುಬಿದ್ರಿ ನಿವಾಸಿ ವಿನಯ ರಾವ್(27) ಆಗಿದ್ದು ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೆರೆಯ ದಡದಲ್ಲಿ ಲ್ಯಾಪ್‌ಟಾಪ್ ಸಹಿತ ಕೆಲ ಪರಿಕರಗಳು ಪತ್ತೆಯಾಗಿದೆ. ದೇವಳದ ಸಿಸಿ ಕ್ಯಾಮಾರ ಸಾಧನವನ್ನು ಪರಿಶೀಲನೆ ನಡೆಸಿದಾಗ ಈತ ರಾತ್ರಿ ಹನ್ನೆರಡರ ಬಳಿಕ ದೇವಳದ ಪರಿಸರದಲ್ಲಿ ಸುತ್ತಾಡುತ್ತಿದ್ದ ದೃಶ್ಯ ಸೆರೆಯಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ, ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕ ಸಹಕಾರದಿಂದ ಶವವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
16 Feb 2024, 04:40 PM
Category: Kaup
Tags: