ಉಡುಪಿ ಜಿಲ್ಲೆಯ ಮಟ್ಟಿಗೆ ನಿರಾಶದಾಯಕ ಬಜೆಟ್ : ಯೋಗೀಶ್ ಶೆಟ್ಟಿ ಬಾಲಾಜಿ
Thumbnail
ಉಡುಪಿ : ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ಇದ್ದ ಬಜೆಟ್ ಅನ್ನೇ ಅಲ್ಪ ಸ್ವಲ್ಪ ಬದಲಾಯಿಸಿ ಮಾಡಿದ ಬಜೆಟ್ ಆಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಿರಸ್ಕರಿಸಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಕೊಡುತ್ತೇವೆ ಅಂತ ಎಲ್ಲೂ ಹೇಳಿಲ್ಲ. ಅಬಕಾರಿ, ನೋಂದಣಿ ಶುಲ್ಕವನ್ನು ಹೆಚ್ಚಿಸಿ ಗ್ಯಾರಂಟಿಗೆ ಹಣ ಕ್ರೋಢೀಕರಿಸಿದ್ದಾರೆ. ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನ . ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಹಾಗು ಇನ್ನಿತರ ಆರೋಗ್ಯ ಕ್ಷೇತ್ರಗಳ ನಿರೀಕ್ಷೆ ಹುಸಿಯಾಗಿದೆ. ಉಡುಪಿ ಜಿಲ್ಲೆಯ ಮಟ್ಟಿಗೆ ನಿರಾಶದಾಯಕ ಬಜೆಟ್ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ ಪ್ರಕಟನೆಯಲ್ಲಿ‌ ತಿಳಿಸಿದ್ದಾರೆ.
16 Feb 2024, 05:24 PM
Category: Kaup
Tags: