ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ - ಶಿಕ್ಷಕ ರಕ್ಷಕ ಸಭೆ
Thumbnail
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ಶನಿವಾರ ಶಿಕ್ಷಕ ರಕ್ಷಕ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಿರ್ವ ಪೋಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಕೃಷ್ಣ ಆಚಾರ್ಯ ಹಾಗೂ ಹೆಡ್ ಕಾನ್ ಸ್ಟೇಬಲ್ ಮಂಜುನಾಥ ಅಡಿಗ ಇವರು ಪೋಷಕರಿಗೆ ಮತ್ತು ಮಕ್ಕಳಿಗೆ ರಸ್ತೆ ಸುರಕ್ಷತೆ, ಸೈಬರ್ ಕ್ರೈಮ್ ಮತ್ತು ಮಾದಕ ವ್ಯಸನಗಳ ಬಗ್ಗೆ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚೈತನ್ಯವಾಣಿ ಸಂಚಿಕೆಯ ದ್ವಿತೀಯ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಬುಡೋಕಾನ್ ಕರಾಟೆ ಸ್ಪರ್ಧೆ, ಚಿಂತನ ಗಣಿತ, ಇಂಗ್ಲೀಷ್, ಸಾಮಾನ್ಯ ಜ್ಞಾನ ಪರೀಕ್ಷೆಗಳಲ್ಲಿ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ರಾಂಕ್ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಕಾರ್ಯದರ್ಶಿ ಗುರುರಾಜ ಆಚಾರ್ಯ ಮತ್ತು ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ, ಮಾತೃ ಮಂಡಳಿಯ ಅಧ್ಯಕ್ಷರಾದ ಲತಾ ಸಂತೋಷ್, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ವಾಣಿ ಸ್ವಾಗತಿಸಿದರು. ಶಿಕ್ಷಕಿ ಅಮಿತಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಾಲಾ ಪ್ರಾಂಶುಪಾಲರಾದ ಸಂಗೀತಾ ರಾವ್ ಶಾಲಾ ಶೈಕ್ಷಣಿಕ ವರದಿಯ ಜೊತೆಗೆ ಪರೀಕ್ಷೆಗಳ ಮಾಹಿತಿಯನ್ನು ನೀಡಿದರು. ಉಪ ಪ್ರಾಂಶುಪಾಲರಾದ ಸೌಮ್ಯ ಮತ್ತು ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಶ್ರುತಿ ವಂದಿಸಿದರು.
Additional image Additional image Additional image
18 Feb 2024, 09:49 AM
Category: Kaup
Tags: