ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಪದ ಪ್ರಧಾನ ಸಮಾರಂಭ
ಬ್ರಹ್ಮಾವರ : ನಮ್ಮ ಆದಾಯದ ಒಂದಂಶವನ್ನು ಸಮಾಜಕ್ಕೆ ನೀಡಿದಾಗ ನಮ್ಮ ಜೀವನದಲ್ಲಿ ಸಾಥ೯ಕತೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಜಯಂಟ್ಸ್ ಸಂಸ್ಥೆಯ ಸೇವೆ ಅನುಪಮ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹೇಳಿದರು.
ಅವರು ಶನಿವಾರ ಸಿಟಿ ಸೆಂಟರ್ ನಲ್ಲಿ ನಡೆದ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ನ ಪದಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಯಂಟ್ಸ್ ಫೆಡರೇಶನ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ಮಾತನಾಡಿ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿದೆ. ಜನ ಔಷಧಿ ಸಂಸ್ಥೆ ಪ್ರಾರಂಭ ಮಾಡಿ ಸಾವಿರಾರು ಜನರಿಗೆ ಸಹಾಯ ಮಾಡಿದೆ ಎಂದರು.
ಜಯಂಟ್ಸ್ ಫೆಡರೇಶನ್ ಉಪಾಧ್ಯಕ್ಷ ತೇಜೇಶ್ವರ ರಾವ್, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು ಶುಭ ಹಾರೈಸಿದರು.
ಈ ಸಂದಭ೯ದಲ್ಲಿ ನೂತನ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಮತ್ತು ಅವರ ತಂಡದ ಪದ ಪ್ರಧಾನ ನಡೆಯಿತು. ಕಾಯ೯ಕ್ರಮದಲ್ಲಿ ಪೋಲಿಸ್ ಉಪ ನಿರೀಕ್ಷಕ ಕೃಷ್ಣಪ್ಪ ಮತ್ತು ಹಿರಿಯ ವಿಭಾಗದ ಕ್ರೀಡಾಪಟು ಗೀತಾ ಎ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸ್ಪಂದನ ವಿಶೇಷ ಚೇತನ ಶಾಲೆಗೆ 2.5 ಲಕ್ಷ ವೆಚ್ಚದ ಸೋಲಾರ್, ಟಿವಿ, ವಿವಿಧ ಪರಿಕರಗಳನ್ನು ನೀಡಲಾಯಿತು. ಬಡ ರೋಗಿಗೆ ಸಹಾಯಧನ ವಿತರಿಸಲಾಯಿತು.
ಸಮಾರಂಭದಲ್ಲಿ ನೂತನ ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್ ಮತ್ತು ನೂತನ 4 ಜನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು.
ವಿವೇಕ್ ಕಾಮತ್ ಸ್ವಾಗತಿಸಿದರು.
ಕಾಯ೯ದಶಿ೯ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ರಾಘವೇಂದ್ರ ಕವಾ೯ಲು ನಿರೂಪಿಸಿದರು.
