ಫೆಬ್ರವರಿ 26 : ಶ್ರೀ ಹಳೆ ಮಾರಿಯಮ್ಮ ಸಭಾಗೃಹದಲ್ಲಿ ಗ್ಯಾರಂಟಿ ಸಮಾವೇಶ
Thumbnail
ಕಾಪು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿರುವ ಹಿನ್ನೆಲೆಯಲ್ಲಿ ಫೆಬ್ರವರಿ 26 ರಂದು ಪೂರ್ವಾಹ್ನ 10.30ಕ್ಕೆ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಗೃಹ ಇಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿರುತ್ತದೆ. ಗ್ಯಾರಂಟಿ ಸಮಾವೇಶಕ್ಕೆ ಜನಪ್ರತಿನಿಧಿಗಳು ಹಾಗೂ ಫಲಾನುಭವಿಗಳು, ಸಾರ್ವಜನಿಕರು ಭಾಗಿಯಾಗಿ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯುವ ಕುರಿತಾದ ಮಾಹಿತಿಯನ್ನು ಸಹ ಸಮಾವೇಶದ ಮೂಲಕ ಪಡೆಯಬಹುದೆಂದು ಕಾಪು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23 Feb 2024, 02:55 PM
Category: Kaup
Tags: