ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ - ಉದ್ಘಾಟನೆ
Thumbnail
ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 55.65 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡದ ಉದ್ಘಾಟನೆಯನ್ನು ಫೆ.28ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಅಂಚೆ ಇಲಾಖೆ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಾ ಬಂದಿದೆ. ಪಡುಬಿದ್ರಿ ಉಪ ಅಂಚೆ ಕಚೇರಿ ಜನಸಾಮಾನ್ಯರ ಕಚೇರಿಯಾಗಲಿ ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ದಕ್ಷಿಣ ಕರ್ನಾಟಕ ವಲಯ ಅಂಚೆ ಸೇವೆಗಳ ಟಿ.ಎಸ್ ಅಶ್ವತ್ಥನಾರಾಯಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
28 Feb 2024, 08:22 PM
Category: Kaup
Tags: