ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ಶಿರ್ವ - ಏಕಾದಶ ವರ್ಷದ ವಾರ್ಷಿಕೋತ್ಸವ
ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗ ಶಿರ್ವ ಇದರ ಏಕಾದಶ ವರ್ಷದ ವಾರ್ಷಿಕೋತ್ಸವ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಉಚ್ಚಿಲ ಸರಸ್ವತಿ ಮಂದಿರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯ ವಿ. ಆಚಾರ್ಯ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಿರ್ವ ಆರಕ್ಷಕ ಠಾಣೆಯ ಉಪ ನಿರೀಕ್ಷಕರಾದ ಶ್ರೀಧರ ಕೆ. ಜಿ., ಹಿರಿಯ ಭಜನಾ ತರಬೇತುದಾರರಾದ ಗಂಗಾಧರ ಆಚಾರ್ಯ ಕುತ್ಯಾರು, ನಾಟಕ ಕಲಾವಿದರಾದ ಪಡುಕುತ್ಯಾರು ಶಶಿರಾಜ್ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು.
ಮೂರು ಜನ ಅಶಕ್ತರಿಗೆ ಧನ ಸಹಾಯ ನೀಡಲಾಯಿತು ಮತ್ತು 27 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಯುವ ಸಂಗಮದ ಅಧ್ಯಕ್ಷ ಉಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಬಳಗದ ಅಧ್ಯಕ್ಷೆ ಸಹನಾ ಗಣೇಶ್ ಆಚಾರ್ಯ, ಕಾರ್ಯದರ್ಶಿ ಮಂಜುಳಾ ಉಮೇಶ್ ಆಚಾರ್ಯ, ಗೌರವಾಧ್ಯಕ್ಷ ಸುರೇಶ ಆಚಾರ್ಯ, ಸ್ಥಾಪಕರಾದ ಕಾಪು ಶ್ರೀಕಾಂತ ಆಚಾರ್ಯ, ಗಣೇಶ್ ಆಚಾರ್ಯ, ಸದಾಶಿವ ಆಚಾರ್ಯ ಉಪಸ್ಥಿತರಿದ್ದರು.
ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿ, ಕಾರ್ಯದರ್ಶಿ ಮಾದವ ಆಚಾರ್ಯ ಪ್ರಾಸ್ತಾವನೆಗೈದರು. ಪುರೋಹಿತ್ ರವಿ ಆಚಾರ್ಯ ವಿಶ್ವಕರ್ಮ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಕೋಶಾಧಿಕಾರಿ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಶರ್ಮಿಳ ಸದಾಶಿವ ಆಚಾರ್ಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ದೇಶಿಸಿದ್ದರು.
