ಮಾಚ್೯ 3 : ಯುವವಾಹಿನಿ ಉಡುಪಿ ಘಟಕ - ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ
ಉಡುಪಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ಮಾಚ್೯ 03, ರವಿವಾರ ಬೆಳಿಗ್ಗೆ 10 ಗಂಟೆ ಲಕ್ಷ್ಮೀ ಸಭಾಭವನ ಲಕ್ಷ್ಮೀ ಟ್ರೇಡ್ ಸೆಂಟರ್ ಚಿಟ್ಪಾಡಿ, ಉಡುಪಿ ಇಲ್ಲಿ ಜರಗಲಿದೆ.
ಜಾನಪದ ವಿದ್ವಾಂಸರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಕನರಾಡಿ ವಾದಿರಾಜ ಭಟ್ ಇವರಿಗೆ ಜಾನಪದ ವಿದ್ವಾಂಸ ಪ್ರಶಸ್ತಿ, ಹಿರಿಯ ಬೈದೇರುಗಳ ದರುಶನ ಪಾತ್ರಿ ಕೋಟಿ ಪೂಜಾರಿಯವರಿಗೆ ಜಾನಪದ ಕಲಾವಿದ ಪ್ರಶಸ್ತಿ,
ಖ್ಯಾತ ಮುಳುಗು ತಜ್ಞರು, ಸಮಾಜ ಸೇವಕ ಈಶ್ವರ ಮಲ್ಪೆ ಇವರು ಗೌರವ ಪುರಸ್ಕಾರ ಪಡೆಯಲಿದ್ದಾರೆ.
ಮುಕ್ಕ ಶ್ರೀನಿವಾಸ್ ಕಾಲೇಜಿನ ಪ್ರೊಫೆಸರ್ ಪ್ರೊ. ಎಂ.ಎಸ್. ಕೋಟ್ಯಾನ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಎಂಎಸ್‌ಡಬ್ಲ್ಯು ವಿಭಾಗ ಮುಖ್ಯಸ್ಥರಾದ ಡಾ। ದುಗ್ಗಪ್ಪ ಕಜೆಕಾರ್ ಅಭಿನಂದನಾ ನುಡಿಗಳನ್ನೀಯಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಒಂದನೇ ಉಪಾಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಭಾಗವಹಿಸಲಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಉಪಸ್ಥಿತರಿರಲಿದ್ದಾರೆ.
ಯುವವಾಹಿನಿ (ರಿ.) ಉಡುಪಿ ಘಟಕದ ಅಧ್ಯಕ್ಷರಾದ ಅಮಿತಾಂಜಲಿ ಕಿರಣ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
