ಅಯೋಧ್ಯೆಯಲ್ಲಿ ಶ್ರೀರಾಮ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್‌ಎಸ್‌ಎಸ್‌ ಮುಖಂಡ ಪಾಂಡುರಂಗ ಶಾನುಭಾಗ್  
Thumbnail
ಅಯೋಧ್ಯೆ: ಆರ್‌ಎಸ್‌ಎಸ್‌ನ ಉಡುಪಿಯ ‌ ಹಿರಿಯ ಸಕ್ರಿಯ ಸದಸ್ಯ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಶ್ರೀ ರಾಮನ ದರ್ಶನ‌ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ  ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ  ಸಂತೋಷದಿಂದ ತೆರಳಿದ್ದರು. ಅಪರಾಹ್ನದ ಪಲ್ಲಕ್ಕಿಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರಿಗೆ ಹೃದಯಾಘಾತವಾಗಿದೆ. ಸಮೀಪವರ್ತಿಗಳು ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಜೀವನ ಪರ್ಯಂತ ಹಿಂದು ಸಿದ್ಧಾಂತಕ್ಕಾಗಿ ದೈಹಿಕ ಅಂಧತ್ವವಿದ್ದರೂ, ಆರ್‌ಎಸ್‌ಎಸ್‌ನಲ್ಲಿ ಅತ್ಯಂತ ಸಕ್ರಿಯರಾಗಿದ್ದ ಶಾನುಭಾಗರು ಅಪೂರ್ವ ಚಿಂತಕರೂ, ರಾಷ್ಟ್ರ ಭಕ್ತರೂ ಆಗಿದ್ದರು.
Additional image
10 Mar 2024, 08:34 PM
Category: Kaup
Tags: