ಬೆಳಪು ಸ್ಪೋರ್ಟ್ಸ್ ಕ್ಲಬ್ : 30 ನೇ ವರ್ಷದ ಸಂಭ್ರಮ
Thumbnail
ಬೆಳಪು : ಇಲ್ಲಿನ ಸ್ಪೋರ್ಟ್ಸ್ ಕ್ಲಬ್ ಇದರ 30ನೇ ವರ್ಷದ ಸಂಭ್ರಮದ ಅಂಗವಾಗಿ 2024ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಯ ಭಾಗವಾಗಿ ಬೆಳಪು ಗ್ರಾಮದ ಎರಡು ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರಿನ ಘಟಕ ಮತ್ತು ಕಪಾಟನ್ನು ಹಸ್ತಾಂತರಿಸಲಾಯಿತು. ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿಯವರು ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಬೆಳಪು ಸ್ಪೋರ್ಟ್ಸ್ ಕ್ಲಬ್ ನಿರಂತರವಾಗಿ ಸಾಮಾಜಿಕ, ಶಿಕ್ಷಣ, ಕ್ರೀಡೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಮುಂದೆಯೂ ಸೇವೆ ನಿರಂತರವಾಗಿರಲಿ ಎಂದು ಹಾರೈಸಿದರು. ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ಶಾನಾವಾಝ್ ಫಝಲುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಾಹೀದ್‌ ನವಾಜ್‌, ಕಾರ್ಯದರ್ಶಿ ರಿಯಾನ್‌ ಅನ್ಸಾರ್‌, ಜೊತೆ ಕಾರ್ಯದರ್ಶಿ ಸಕ್ಲೆನ್ ಅಹಮ್ಮದ್, ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಹಿರಿಯ ಸದಸ್ಯರುಗಳಾದ ಅಲ್ತಾಫ್ ಅಬ್ದುಲ್ ಘನಿ, ಸಹೀದ್‌ ಅಹ್ಮದ್, ಅಕ್ರಮ್‌ ಮಹತಾಬ್‌ ಉಪಸ್ಥಿತರಿದ್ದರು. ಅಂಗನವಾಡಿಯ ಶಿಕ್ಷಕಿಯರಾದ ಪ್ರಿಯ, ಆಶಾಲತಾ ಭಾಗವಹಿಸಿದ್ದರು. ಖಾಲಿದ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.
Additional image Additional image
14 Mar 2024, 10:06 AM
Category: Kaup
Tags: