ಉಡುಪಿ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ
Thumbnail
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನೂತನ ಅಧ್ಯಕ್ಷರಾಗಿ ಕಾಪುವಿನ ಶರ್ಫುದ್ದೀನ್ ಶೇಖ್ ಅವರನ್ನು ನೇಮಕಗೊಳಿಸಲಾಗಿದೆ. ಎಐಸಿಸಿ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪಗಢಿ ಅವರು ರಾಜ್ಯದ ವಿವಿಧ ಜಿಲ್ಲೆಗಳ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರ ನೇಮಕವನ್ನು ಮಾಡಿದ್ದು ಉಡುಪಿ ಜಿಲ್ಲೆಗೆ ಶರ್ಫುದ್ದೀನ್ ಶೇಖ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಆತ್ರಾಡಿ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಸಂಯೋಜಕರಾದ ಝೀನಲ್ ಗಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21 Mar 2024, 10:50 AM
Category: Kaup
Tags: