ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ ಸಮಾರಂಭ
Thumbnail
ಕಾಪು : ಮಂಡಲ ಬಿಜೆಪಿ ಇದರ ಯುವ ಮೋರ್ಚಾದ ಪದಗ್ರಹಣ ಸಮಾರಂಭ ರವಿವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಮಾತನಾಡಿ ಈ ದೇಶದ ಮುಂದಿನ ಭವಿಷ್ಯ ಯುವ ಸಮುದಾಯದ ಮೇಲಿದೆ. ಯುವ ಸಮುದಾಯ ಈ ದೇಶದ ಮುಂದಿನ ಶಕ್ತಿ ಎಂದು ಹೇಳಿದ ಅವರು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು "ಒನ್ ಬೂತ್ ಟೆನ್ ಯೂತ್" ಎಂಬಂತೆ ತಳ ಮಟ್ಟದಿಂದ ಸಂಘಟನಾ ಪ್ರರ್ವವನ್ನು ಆರಂಭಿಸಿ ಈ ಬಾರಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸಚಿನ್, ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಶೆಟ್ಟಿ ಮಟ್ಟಾರು ಹಾಗೂ ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು
24 Mar 2024, 07:57 PM
Category: Kaup
Tags: