ಹೆಜಮಾಡಿ : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗಳಿಸುವುದು ಖಚಿತ - ವಿನಯಕುಮಾರ್ ಸೊರಕೆ
Thumbnail
ಹೆಜಮಾಡಿ : ಕರ್ನಾಟಕದಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಅಚಲ ವಿಶ್ವಾಸ ಇಟ್ಟುಕೊಂಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗಳಿಸುವುದು ಖಚಿತ ಎಂದು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಅವರು ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಅಗಮಿಸಿದ ಸಂದರ್ಭ ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ ಸಂದರ್ಭ ಮಾಧ್ಯಮದ ಜತೆ ಮಾತನಾಡಿದರು. ಕಳೆದ ಬಾರಿ ಬಿಜೆಪಿ 25 ಸ್ಥಾನ ಗೆದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಲಿಲ್ಲ. ನಮ್ಮ ತೆರಿಗೆ ಪಾಲನ್ನು ತರಲು ಸಾಧ್ಯವಾಗಲಿಲ್ಲ. ಹಾಗಾಗಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಲಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಖಚಿತವಾಗಿ ಗೆಲ್ಲಲಿದೆ ಎಂದರು. ಕೇಂದ್ರ ಸರಕಾರದ ದುರಾಡಳಿತದಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯ ಸರಕಾರದ ಸುದೃಢ ಅಡಳಿತಕ್ಕೆ ಜನತೆ ಮೆಚ್ಚುಗೆ ಸೂಚಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಪಡೆಯುವುದು ಶತಸಿದ್ಧ ಎಂದವರು ಹೇಳಿದರು. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏಪ್ರಿಲ್ 6ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಈ ಸಂದರ್ಭ ಪಕ್ಷದ ಬೃಹತ್ ಸಮಾವೇಶ ಅನಾವರಣಗೊಳ್ಳಲಿದೆ ಎಂದವರು ಹೇಳಿದರು. ಪಕ್ಷದ ಪ್ರಮುಖರಾದ ಅಶೋಕ್ ಕುಮಾರ್ ಕೊಡವೂರು, ದಿನೇಶ್ ಮಳವಳ್ಳಿ, ದೀಪಕ್ ಕೋಟ್ಯಾನ್, ಗೀತಾ ವಾಗ್ಲೆ, ನವೀನ್‌ಚಂದ್ರ ಸುವರ್ಣ, ಸಂತೋಷ್ ಕುಲಾಲ್, ಹರೀಶ್ ಕಿಣಿ, ದಿವಾಕರ ಶೆಟ್ಟಿ ಕಾಪು, ಶಾಂತಲತಾ ಶೆಟ್ಟಿ, ರಮೀಝ್ ಹುಸೈನ್, ಸುನಿಲ್ ಬಂಗೇರ, ನಾಗೇಶ್ ಉದ್ಯಾವರ, ಎಮ್.ಎ.ಗಫೂರ್, ವೈ. ಸುಧೀರ್ ಕುಮರ್, ನವೀನ್‌ಚಂದ್ರ ಜೆ. ಶೆಟ್ಟಿ, ಜಿತೇಂದ್ರ ಫುರ್ಟಾಡೊ, ವಿಶ್ವಾಸ್ ವಿ. ಅಮೀನ್, ವೈ.ಸುಕುಮಾರ್, ಸುಧೀರ್ ಕರ್ಕೇರ, ದೀಪಕ್ ಎರ್ಮಾಳ್, ಅಮೀರ್, ಚರಣ್ ವಿಠಲ್, ರಮೇಶ್ ಕಾಂಚನ್, ಯು.ಸಿ.ಶೇಖಬ್ಬ, ದಿನೇಶ್ ಪಲಿಮಾರು, ಕರುಣಾಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Additional image
29 Mar 2024, 07:42 PM
Category: Kaup
Tags: