ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಗುರ್ಮೆ ಸುರೇಶ್ ಶೆಟ್ಟಿ
Thumbnail
ಕಾಪು : ಬಿಜೆಪಿ ಪಕ್ಷದ ಭೈರಂಪಳ್ಳಿ ಶಕ್ತಿ ಕೇಂದ್ರದ ಸಭೆ ಶುಕ್ರವಾರ ಪದ್ಮರಾಜ್ ರಾವ್ ಅವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಭೈರಂಪಳ್ಳಿ ಶಕ್ತಿ ಕೇಂದ್ರದ ಸಹ ಸಂಚಾಲಕರಾದ ಸತೀಶ್ ಶೆಟ್ಟಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಭೈರಂಪಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
29 Mar 2024, 07:54 PM
Category: Kaup
Tags: