ಕೆಪಿಸಿಸಿ ಪ್ರಚಾರ ಸಮಿತಿ ಪದಗ್ರಹಣ ; ನೂತನ ರಾಜ್ಯಾಧ್ಯಕ್ಷರಾಗಿ ವಿನಯ ಕುಮಾರ್ ಸೊರಕೆ
Thumbnail
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಕೊಂಡ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಘಾಟನೆ ಕಾರ್ಯಕ್ರಮ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಎನ್ ಎಸ್ ಯು ಐ ಘಟಕದ ಅಧ್ಯಕ್ಷ ಸೌರಭ್ ಬಲ್ಲಾಳ್, ಪ್ರಶಾಂತ್ ಜತ್ತನ್ನ, ರಮೀಝ್ ಹುಸೇನ್, ಹಮೀದ್ ಯೂಸುಫ್, ಸಾಹುಲ್ ಹಮೀದ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
06 Apr 2024, 05:17 PM
Category: Kaup
Tags: