ಏಪ್ರಿಲ್ 17 : ಚುನಾವಣಾ ಕರ್ತವ್ಯನಿರತರಿಗೆ ಎರಡನೇ ಹಂತದ ತರಬೇತಿ ಕಾರ್ಯಗಾರ
ಕಾಪು : ಲೋಕಸಭಾ ಚುನಾವಣೆಯ ಮತದಾನ ದಿನದಂದು ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಏಪ್ರಿಲ್ 17ರಂದು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಎರಡನೇ ಹಂತದ ತರಬೇತಿ ಕಾರ್ಯಗಾರ ಏರ್ಪಡಿಸಲಾಗಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದವರಿಗೆ ಭಂಡಾರ್ ಕಾರ್ಸ್ ಕಾಲೇಜು ಕುಂದಾಪುರ, ಉಡುಪಿ ವಿಧಾನಸಭಾ ಕ್ಷೇತ್ರದವರಿಗೆ ಸೈಂಟ್ ಸಿಸಿಲಿಸ್ ಸ್ಕೂಲ್ ಬ್ರಹ್ಮಗಿರಿ ಉಡುಪಿ, ಕಾಪು ವಿಧಾನಸಭಾ ಕ್ಷೇತ್ರದವರಿಗೆ ದಂಡತೀರ್ಥ ಪಿಯು ಕಾಲೇಜು ಉಳಿಯಾರಗೋಳಿ ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರದವರಿಗೆ ಕ್ರೈಸ್ಟ್ ಕಿಂಗ್ ಪಿಯು ಕಾಲೇಜು ಗಾಂಧಿ ಮೈದಾನ ಕಾರ್ಕಳದಲ್ಲಿ ತರಬೇತಿ ನಡೆಯಲಿದೆ.
ಸಿಬ್ಬಂದಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೈಂದೂರು ಕ್ಷೇತ್ರದ ಬೈಂದೂರು ತಾಲೂಕು ಆಡಳಿತ ಸೌಧ, ಕುಂದಾಪುರ ಕ್ಷೇತ್ರದ ಕುಂದಾಪುರ ಗಾಂಧಿ ಮೈದಾನ, ಉಡುಪಿ ಕ್ಷೇತ್ರದ ಉಡುಪಿ ಬೋರ್ಡ್ ಹೈಸ್ಕೂಲ್ ಬಳಿ ಹಾಗೂ ಕಾರ್ಕಳ ಕ್ಷೇತ್ರದಿಂದ ಆಗಮಿಸುವ ಪೋಲಿಂಗ್ ಅಧಿಕಾರಿಗಳು ಕಾರ್ಕಳ ಪೇಟೆ ಹಾಗೂ ಬಂಡೀಮಠ ಬಸ್ ನಿಲ್ದಾಣಕ್ಕೆ ಬೆಳಗ್ಗೆ 7 ಗಂಟೆಗೆ ಆಗಮಿಸಬೇಕು ಎಂದು ಕಾಪು ತಹಸೀಲ್ದಾರ್ ಪ್ರತಿಭಾ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
