ಉದ್ಯಾವರ : ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ
Thumbnail
ಉದ್ಯಾವರ : ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ. 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 ಪ್ರತಿಶತ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯು, ಕಳೆದ 15 ವರ್ಷಗಳಲ್ಲಿ 13 ಬಾರಿ ಈ ಸಾಧನೆ ಮಾಡಿದೆ. ಈ ವಿದ್ಯಾ ಸಂಸ್ಥೆಯು ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಆಡಳಿತಕ್ಕೆ ಒಳಪಟ್ಟಿದೆ.
09 May 2024, 12:53 PM
Category: Kaup
Tags: