ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ
ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ 25 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 4, ಪ್ರಥಮ ಶ್ರೇಣಿಯಲ್ಲಿ 10, ದ್ವಿತೀಯ ಶ್ರೇಣಿಯಲ್ಲಿ 3, ತೃತೀಯ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
