ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
Thumbnail
ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 11ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಶನಿವಾರ ಕಾಲೇಜಿನಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗಳು ಸಂಸ್ಥೆಗೆ ಒಂದು ಉತ್ತಮ ಜಾಹೀರಾತುಗಳಾಗಿವೆ. ವಿದ್ಯಾರ್ಥಿಗಳ ಉತ್ತಮ ನಡವಳಿಕೆ ಸಂಸ್ಥೆಯ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ. ಪದವೀಧರರು ಸಮಾಜದ ಎಲ್ಲಾ ಸವಾಲುಗಳನ್ನು ಎದುರಿಸಲು ಬೇಕಾಗುವಂತಹ ಕೌಶಲ್ಯವನ್ನು ಹೊಂದಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರತೀ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಎರಡು ಉತ್ತಮ ಪ್ರಾಜೆಕ್ಟ್‌ಗಳಿಗೆ ಬಹುಮಾನ ನೀಡಿಲಾಯಿತು. ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಡೀನ್‌ಗಳು ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Additional image Additional image Additional image
13 May 2024, 05:59 PM
Category: Kaup
Tags: