ಶಿರ್ವ : ನಾಲ್ಕು ವಿದ್ಯಾರ್ಥಿಗಳು ನಾಪತ್ತೆ
Thumbnail
ಶಿರ್ವ : ಇಲ್ಲಿನ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮಧ್ಯಾಹ್ನ 2:30 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯ ನಡುವಿನ ಅವಧಿಯಲ್ಲಿ ಬಿಹಾರ ರಾಜ್ಯದ ವಿದ್ಯಾರ್ಥಿಗಳಾದ ತಬಾರಕ್‌, ಜಮ್‌ ಶೇಡ್‌, ತಂಜೀರ್‌ ಆಲ್‌ಮ್‌, ಶಾಹಿಲ್ ಇವರುಗಳು ಸಂಸ್ಥೆಯಿಂದ ಹೊರಗಡೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಪರ್ವೇಜ್‌ ಸಲೀಂ ಶಿರ್ವ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.
15 May 2024, 01:34 PM
Category: Kaup
Tags: