ಕರಾವಳಿ ಸೊಗಡಿನ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ತೋರಬೇಕಿದೆ : ಬಿ.ಜಯಕರ್ ಶೆಟ್ಟಿ ಇಂದ್ರಾಳಿ
Thumbnail
ಉಡುಪಿ : ಸಿನೆಮಾಗಳಲ್ಲಿ ಕರಾವಳಿಯ ಕಲಾವಿದರು, ತಂತ್ರಜ್ಞರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ಮಾಡುತ್ತಿದ್ದು, ನಮ್ಮ ಕರಾವಳಿಯ ಸೊಗಡನ್ನು ಪ್ರತಿಬಿಂಬಿಸುವ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ತೋರಬೇಕಿದೆ ಎಂದು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಅಮ್ಚೆ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣಗೊಳ್ಳುತ್ತಿರುವ ಪ್ರೊಡಕ್ಷನ್ ನಂ.1 ಮಕ್ಕಳ ಕನ್ನಡ ಚಲನಚಿತ್ರದ ಕಲಾವಿದರ ಆಯ್ಕೆ ಶಿಬಿರವನ್ನು ಜಗನ್ನಾಥ ಸಭಾ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ ಮಾತನಾಡಿ, ಕರಾವಳಿಯಲ್ಲಿ ಕೊಂಕಣಿ, ಕನ್ನಡ, ತುಳು ಭಾಷೆಯ ಚಿತ್ರಗಳಿಗೆ ಉತ್ತಮ ಪ್ರೇಕ್ಷಕರಿದ್ದಾರೆ. ಮೂರು ಭಾಷೆಗಳ ಸಿನೆಮಾಗಳ ನಿರ್ಮಾಣಕ್ಕೆ ವಿಫುಲ ಅವಕಾಶಗಳಿವೆ ಎಂದರು. ಚಲನಚಿತ್ರ ಕಲಾವಿದರಾದ ಶೋಭರಾಜ್ ಪಾವೂರು, ರಾಹುಲ್ ಅಮೀನ್, ವಿನೀತ್ ಕುಮಾರ್, ಶೈಲಶ್ರೀ ಮುಲ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ನಿರ್ಮಾಪಕರಾದ ದತ್ತಾತ್ರೇಯ ಪಾಟ್ಕರ್, ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ, ಚಂದ್ರಕಲಾ ರಾವ್, ಕ್ಲಿಂಗ್ ಜಾನ್ಸನ್ ಉಪಸ್ಥಿತರಿದ್ದರು. ಚಿತ್ರ ನಿರ್ದೇಶಕ ಸಂದೀಪ್ ಕಾಮತ್ ಸ್ವಾಗತಿದರು. ಛಾಯಾಗ್ರಾಹಕ ಭುವನೇಶ್ ಪ್ರಭು ವಂದಿಸಿದರು.
19 May 2024, 10:19 AM
Category: Kaup
Tags: