ಉಡುಪಿ : ಜನತಾದಳ ಪಕ್ಷ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ
Thumbnail
ಉಡುಪಿ : ಜನತಾದಳ ಜಾತ್ಯಾತೀತ ಪಕ್ಷ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್. ಡಿ.ದೇವೇಗೌಡರ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಮಾಡುವ ಮೂಲಕ ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿ ಯವರು ಹುಟ್ಟುಹಬ್ಬ ಆಚರಿಸಿದರು. ಈ ಸಂದರ್ಭ ಅವರು ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ, ಕಾಂಗ್ರೆಸ್ ಪಕ್ಷ ಷಡ್ಯಂತರವನ್ನು ಮಾಡುವ ಮುಖಾಂತರ ಅನೇಕ ಬೆಳವಣಿಗೆಯನ್ನು ಕರ್ನಾಟಕದಲ್ಲಿ ಮಾಡುತ್ತಿದೆ. ತನ್ನ ಕಾರ್ಯಕರ್ತರ ಮುಖಾಂತರ ದೇವೇಗೌಡರ ಭಾವಚಿತ್ರಕ್ಕೆ ಮಸಿಯನ್ನು ಬಳಿದಿದ್ದಾರೆ ಇದು ಅತ್ಯಂತ ಕ್ರೂರವಾದ ಕೃತ್ಯ, ಮಾಜಿ ಪ್ರಧಾನಿ ಆದಂತಹ ದೇವೇಗೌಡರು ನಮ್ಮ ರಾಜ್ಯಕ್ಕೆ ದೇಶಕ್ಕೆ ಯಾವ ಕೊಡುಗೆಯನ್ನು ಕೊಟ್ಟಿದ್ದಾರೆ ಎಂಬುದು ನಾಡಿನ ಜನತೆಗೆ ಗೊತ್ತಿದೆ. ಅದಕ್ಕೋಸ್ಕರವಾಗಿ ನಾವಿವತ್ತು ಅವರ ಹುಟ್ಟುಹಬ್ಬವನ್ನು ಆಚರಿಸಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಮಾಡಿದ್ದೇವೆ. ಏನು ಇವರು ಮಸಿ ಬಳಿದಿದ್ದಾರೆ ಇದೆಲ್ಲವೂ ಪರಿಶುದ್ಧವಾಗಲಿ, ದೇವೇಗೌಡರು ಇನ್ನಷ್ಟು ವರ್ಷ ಬಾಳಲಿ, ಅವರಿಗೆ ಒಳ್ಳೆಯಆಯುಷ್ಯ, ಆರೋಗ್ಯವನ್ನು ಭಗವಂತ ಕರುಣಿಸಲಿ ಇನ್ನಷ್ಟು ರಾಜ್ಯಕ್ಕೆ ದೇಶಕ್ಕೆ ಅವರ ಸೇವೆ ದೊರಕಲಿ ಅದರೊಂದಿಗೆ ನಮ್ಮ ಪಕ್ಷ ವನ್ನೂ ಕಟ್ಟಿ ಬೆಳೆಸುವಂತಹ ಹುಮ್ಮಸ್ಸು ಅವರಲ್ಲಿ ಇದೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ನೈರುತ್ಯ ಶಿಕ್ಷಣ ಕ್ಷೇತ್ರ ಮತ್ತು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ/ಜೆಡಿಎಸ್ ಜಂಟಿ ಅಭ್ಯರ್ಥಿಗಳಾದ ಎಸ್. ಎಲ್ ಭೋಜೇಗೌಡ ಮತ್ತು ಡಾ. ಧನಂಜಯ್ ಸರ್ಜೆ ಇವರ ಗೆಲುವಿಗೆ ಯಾವ ರೀತಿಯಾಗಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ಜಯಕುಮಾರ್ ಪರ್ಕಳ, ರಮೇಶ್ ಕುಂದಾಪುರ, ಗಂಗಾಧರ್ ಭಿರ್ತಿ, ರಾಮರಾವ್, ರಶೀದ್, ಕೀರ್ತಿರಾಜ್, ಶ್ರೀಕಾಂತ್ ಕಾರ್ಕಳ, ಎಂ.ಡಿ ರಫೀಕ್, ವೆಂಕಟೇಶ್ ಎಂ.ಟಿ, ದೇವರಾಜ ತೊಟ್ಟಂ, ಪದ್ಮನಾಭ. ಆರ್. ಕೋಟ್ಯಾನ್, ರಂಗ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
20 May 2024, 01:29 PM
Category: Kaup
Tags: