ಕಾಪು : ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಸಂಪನ್ನ
ಕಾಪು : ಶ್ರೀದೇವಿ ಭಜನಾ ಮಂಡಳಿ ಮಂಡೇಡಿ ಇವರ ವತಿಯಿಂದ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ, ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಸಹಯೋಗದೊಂದಿಗೆ ಶ್ರೀದೇವಿ ಭಜನಾ ಮಂಡಳಿ ಮಂಡೇಡಿ ಇಲ್ಲಿ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಹಾಗೂ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಭಜನಾ ಮಂಡಳಿಯ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ವಿ.ಜಿ.ಶೆಟ್ಟಿ ನೇರವೇರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಡಾ. ರೋಶ್ನಿ ಪೂಂಜಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಕೃಷ್ಣ ಮೂರ್ತಿಯವರು ಅಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ತಜ್ಞ ವೈದ್ಯರಾದ ಡಾ|| ತೇಜಸ್ವಿನಿ, ನೇತ್ರಾಧಿಕಾರಿ ಅಮರ್, ಸಾರ್ವಜನಿಕ ಸಂಪರ್ಕಾಧಿಕಾರಿ ಹರ್ಷ, ಸಿ.ಎ. ಬ್ಯಾಂಕಿನ ಉಪಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಹಾಲು ಉತ್ಪಾದಕ ಸಂಘದ ಅಧ್ಯಕ್ಷರಾದ ಶಿವರಾಮ್ ಜೆ. ಶೆಟ್ಟಿ, ರಮೇಶ್ ಕೆ ಮಧ್ಯಸ್ಥರು, ರಮೇಶ್ ಶೆಟ್ಟಿ ಗೌರವ ಸಲಹೆಗಾರರು, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಶ್ರೀದೇವಿ ಭಜನಾ ಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಕುಂತಳಾ ವಂದಿಸಿದರು.
