ಉಚ್ಚಿಲ : ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ; ರಾಜ್ಯಕ್ಕೆ  5ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ
Thumbnail
ಉಚ್ಚಿಲ : ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಉದ್ಘಾಟನೆ ಶುಕ್ರವಾರ ಶಾಲಾ ಕಲಾ ವೇದಿಕೆಯಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಸನ್ಮಾನ : ಎಸ್‌ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ  5ನೇ ರ‍್ಯಾಂಕ್, ಉಡುಪಿ ಜಿಲ್ಲಾ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ ಪಡೆದ ಶಾಲಾ ವಿದ್ಯಾರ್ಥಿ ಸಮರ್ಥ್‌ ಆರ್‌ ಜೋಷಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಶಿಲ್ಪಾ ಗಂಗಾಧರ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ವೈ, ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾ ದಿನೇಶ್‌ ಸುವರ್ಣ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಕಲಾವತಿ ಆಚಾರ್ಯ, ಸಹ ಶಿಕ್ಷಕರು, ಗ್ರಾಪಂ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮೀ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್‌ ಕುಲಾಲ್‌ ವಂದಿಸಿದರು.
Additional image
31 May 2024, 05:21 PM
Category: Kaup
Tags: