ಜೂನ್ 8 ರಿಂದ 11 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಉಡುಪಿ : ಮುಂದಿನ ಮೂರು ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಮುಂದಿನ ಎರಡು ಮೂರು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್ 8 ಮತ್ತು 9 ರಂದು ರೆಡ್ ಅಲರ್ಟ್, ಜೂನ್ 11 ಮತ್ತು 12 ರಂದು ಆರೆಂಜ್ ಅಲರ್ಟ್ ಜಾರಿಯಲ್ಲಿರುತ್ತದೆ. ಮುಂದಿನ ಐದು ದಿನಗಳ ಕಾಲ ಮೀನುಗಾರರಿಗೆ ಹೊರಹೋಗದಂತೆ IMD ಎಚ್ಚರಿಕೆ ನೀಡಿದೆ.
IMD ಪ್ರಕಾರ, ಮುಂದಿನ ಏಳು ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹೆಚ್ಚಿನ ವೇಗದ ಗಾಳಿಯೊಂದಿಗೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
