ಪಡುಬಿದ್ರಿ : ಆಸ್ಪೆನ್‌ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. - ಸಿಎಸ್ಆರ್ ನಿಧಿಯಿಂದ 20 ಲಕ್ಷ ರೂ. ಮೊತ್ತದ ವಿವಿಧ ಸವಲತ್ತುಗಳ ವಿತರಣೆ
Thumbnail
ಪಡುಬಿದ್ರಿ : ಆಸ್ಪೆನ್‌ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. ಸಂಸ್ಥೆ ವತಿಯಿಂದ ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದಲ್ಲಿ ಶನಿವಾರ ಪಡುಬಿದ್ರಿ ಬಂಟರ ಭವನದಲ್ಲಿ ಜರಗಿದ 2023-24ನೇ ಸಾಲಿನ ಸಿಎಸ್‌ಆರ್ ಯೋಜನೆಯ ವಿವಿಧ ಸವಲತ್ತುಗಳ ಹಸ್ತಾಂತರ ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಆಸ್ಪೆನ್ ಇನ್ಫ್ರಾ ಕಂಪೆನಿಯು ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದು ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. 20 ಲಕ್ಷ ರೂ. ಮೊತ್ತದ ಸವಲತ್ತು ವಿತರಣೆ : ಸಿಎಸ್‌ಆರ್ ಯೋಜನೆಯಲ್ಲಿ ಪಡುಬಿದ್ರಿಯ 3 ಶಾಲೆ, 3 ಅಂಗನವಾಡಿ, ಪಾದೆಬೆಟ್ಟು ದೇವಸ್ಥಾನ, ಪಡುಬಿದ್ರಿ, ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 20 ಮಹಿಳೆಯರಿಗೆ ಸೋಲಾ‌ರ್ ಆಧಾರಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಆಸ್ಪೆನ್‌ ಇನ್ಫ್ರಾ ಸಂಸ್ಥೆಯ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ, ಕಂಪನಿ ಪ್ರತಿ ವರ್ಷ ಸಿಎಸ್‌ಆರ್ ಯೋಜನೆ ಮೂಲಕ ಪಡುಬಿದ್ರಿ, ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿ, ಕೆಪಿಸಿಸಿ ಕೊಆರ್ಡಿನೇಟರ್ ನವೀನ್ ಚಂದ್ರ ಶೆಟ್ಟಿ ಮಾತನಾಡಿದರು. ಈ ಸಂದರ್ಭ ಶಶಿಧರ ಶೆಟ್ಟಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ, ಭಾರತೀಯ ವಿಕಾಸ್ ಟ್ರಸ್ಟ್‌ನ ಜಗದೀಶ್‌ ಪೈ, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಪೂಜಾರಿ, ಸದಸ್ಯ ಅಬ್ದುಲ್ ಅಜೀಜ್, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ಉಪಸ್ಥಿತರಿದ್ದರು. ಆಸ್ಪೆನ್‌ ಇನ್ಫ್ರಾ ಸಂಸ್ಥೆಯ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ ಸ್ವಾಗತಿಸಿದರು. ಡಾ.ಸುಧೀರ್ ರಾಜ್ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.
Additional image Additional image Additional image
09 Jun 2024, 12:10 PM
Category: Kaup
Tags: