ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಾಲ ಕಾರ್ಮಿಕ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.
ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೋಡ್ರಿಗಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿಧರು. ಈ ಸಂದರ್ಭ ಮಾತನಾಡಿದ ಅವರು ಭಾರತದಲ್ಲಿರುವ ಬಡ ಕುಟುಂಬದ ಬಗ್ಗೆ ತಿಳಿಸಿ, ಆರ್ಥಿಕ ಅಸಮಾನತೆಯನ್ನು ಸರಿದೂಗಿಸುವುದಕ್ಕಾಗಿ ಜನರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಿದ್ದಾರೆ. ಆದರೆ ಇದು ಕಾನೂನು ಪ್ರಕಾರ ಅಪರಾಧವಾಗಿರುತ್ತದೆ. ಇದರ ಬಗ್ಗೆ ನಾವು ಎಚ್ಚರವಹಿಸಬೇಕಾಗಿದೆ ಎಂದರು.
ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ, ಶಿಕ್ಷಣ ಸಂಯೋಜಕರಾದ ಶಿವಣ್ಣ ಬಾಯಾರ್ ಹಾಗೂ ಶಿಕ್ಷಕ -ಶಿಕ್ಷಕೇತರರು ಉಪಸ್ಥಿತರಿದ್ದರು.
