ಉಡುಪಿ : ಸಂಸದ ಕೋಟಾರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಪೈಪೋಟಿ ಶುರು ; ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಯಲ್ಲಿ
Thumbnail
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗುತ್ತಿದ್ದಂತೆ ಅವರಿಂದ ತೆರವಾದ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು ಒಂದೆಡೆ ಜಾತಿ ಲೆಕ್ಕಾಚಾರ ಮತ್ತೊಂದೆಡೆ ಪಕ್ಷದ ಹಿರಿತನ ಜೊತೆಗೆ ತೆರೆಮರೆಯ ಕಸರತ್ತು ನಡೆಯುತ್ತಿದೆ. ಈ‌ ನಡುವೆ ಬಿಲ್ಲವ ಸಮುದಾಯದ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಸಾರ್ವಜನಿಕ ವಲಯದಲ್ಲಿ ಬೆರೆಯುತ್ತಾ, ಸಮಾಜ ಸೇವೆಯಲ್ಲಿಯೂ ತಮನ್ನು ತಾವು ತೊಡಗಿಸಿಕೊಳ್ಳುವ ಗುಣ ಅವರಲ್ಲಿದೆ. ಇವರು ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿರುವ ಇವರು, 2 ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಜನರ ಕಷ್ಟ ಸುಖದಲ್ಲಿ ಬೆರೆತವರು. ಸಮಾಜ ಸೇವೆಗೆ ದಿನದ 24 ಗಂಟೆಯು ಸ್ಪಂದಿಸುವ ಗೀತಾಂಜಲಿ ಸುವರ್ಣ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಸದಸ್ಯರಾಗಿ ಅವಕಾಶ ನೀಡಿದರೆ ಮಹಿಳೆಯರಿಗೂ ಪ್ರಾಶಸ್ತ್ಯ ನೀಡಿದಂತಾಗುತ್ತದೆ. ಈ ಬಗ್ಗೆ ಪಕ್ಷದ ಹಿರಿಯರು, ನಾಯಕರು ವರಿಷ್ಟರ ಗಮನಕ್ಕೆ ತರಬೇಕೆಂದು ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಭಿಪ್ರಾಯವಾಗಿದೆ.
14 Jun 2024, 07:28 AM
Category: Kaup
Tags: