ಪಡುಬಿದ್ರಿ : ಎಸ್ ಬಿ ವಿ ಪಿ ಹಿ.ಪ್ರಾ. ಶಾಲೆ, ಗಣಪತಿ ಪ್ರೌಢಶಾಲೆ - ವಿದ್ಯಾನಿಧಿ ಪ್ರದಾನ ಸಮಾರಂಭ
ಪಡುಬಿದ್ರಿ : ಇಲ್ಲಿನ ಶ್ರೀ ಬ್ರಹ್ಮ ವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ, ಗಣಪತಿ ಪ್ರೌಢಶಾಲೆ ಪಡುಬಿದ್ರಿ, ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆವಿದ್ಯಾರ್ಥಿ ಸಂಘ ಇವರ ಸಹಯೋಗದಲ್ಲಿ ಕನ್ನಡ ಮಾಧ್ಯಮ ಶಾಲೆಯ ಪುನರುತ್ಥಾನದ ದೃಢ ಸಂಕಲ್ಪದೊಂದಿಗೆ ಜೂ.18 ರಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾದ ವಿದ್ಯಾನಿಧಿ - ಪ್ರದಾನ ಸಮಾರಂಭವನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಶುಭ ಹಾರೈಸಿದರು.
ಸಮಾರಂಭದಲ್ಲಿ ಶೈಕ್ಷಣಿಕ ನಿಧಿ, ವಿಧ್ಯಾರ್ಥಿ ವೇತನ, ಸ್ಪೋಕನ್ ಇಂಗ್ಲಿಷ್ ಪುಸ್ತಕ ಹಸ್ತಾಂತರ ಮಾಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗಣಪತಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಕೆ. ಅನಂತಪಟ್ಟಾಭಿ ರಾವ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪುಂಡಲೀಕ ಮರಾಠೆ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ರತ್ನಾಕರ ರಾಜ್ ಅರಸು, ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿ ಪ್ರತಿನಿಧಿ ಪ್ರೊ. ನಿತ್ಯಾನಂದ, ಉದ್ಯಮಿಗಳಾದ ಪ್ರಥ್ವಿರಾಜ್ ಹೆಗ್ಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
