ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ ಕುತ್ಯಾರು : ಯೋಗ ದಿನಾಚರಣೆ
Thumbnail
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ಜೂ.21ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪತಂಜಲಿ ಯೋಗ ಸಮಿತಿ ಇದರ ಸಕ್ರಿಯ ಸದಸ್ಯರಾಗಿರುವ ಶ್ರೀಪತಿ ಕಾಮತ್ ಹಾಗೂ ಗಣೇಶ್ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ವಿವಿಧ ಯೋಗಾಸನಗಳನ್ನು ತಿಳಿಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಶಾಲಾ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ ಹಾಗೂ ಶಾಲಾ ಪ್ರಾಂಶುಪಾಲರಾದ ಸಂಗೀತಾ, ಶಿಕ್ಷಕ‌ ವೃಂದ ಉಪಸ್ಥಿತರಿದ್ದರು.
Additional image
22 Jun 2024, 07:42 AM
Category: Kaup
Tags: