ಓಂ ಶ್ರೀ ಯೋಗ ಕೇಂದ್ರ ಬಸ್ರೂರು : ಯೋಗ ದಿನಾಚರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Thumbnail
ಬಸ್ರೂರು : ಓಂ ಶ್ರೀ ಯೋಗ ಕೇಂದ್ರ ಬಸ್ರೂರು ವತಿಯಿಂದ ಜರಗಿದ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ .ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು. ಸನ್ಮಾನ : 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಉದ್ಯಮಿ ಅನಿಲ್ ಕುಮಾರ್ ಶೆಟ್ಟಿ, ನಿರುಪಮ ಹೆಗ್ಡೆ ಉಪಸ್ಥಿತರಿದ್ದರು. ಓಂ ಶ್ರೀ ಯೋಗ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ್ ಐತಾಳ್ ಸ್ವಾಗತಿಸಿದರು. ಸಾರಿಕಾ ಅಶೋಕ್ ನಿರೂಪಿಸಿದರು. ಕಾರ್ಯದರ್ಶಿ ಅಶೋಕ್ ಕೆರೆಕಟ್ಟೆ ವಂದಿಸಿದರು.
23 Jun 2024, 03:12 PM
Category: Kaup
Tags: