ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ - ಇಲಾಖಾಧಿಕಾರಿಗಳೊಂದಿಗೆ ಶಾಸಕರ ಭೇಟಿ
Thumbnail
ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ರವಿವಾರ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್ ಹಾಗೂ ಕಾಪು ತಹಶೀಲ್ದಾರರಾದ ಪ್ರತಿಭ ಆರ್., ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಅಭಿಯಂತರರಾದ ಜಯರಾಜ್ ಉಪಸ್ಥಿತರಿದ್ದರು.
23 Jun 2024, 05:03 PM
Category: Kaup
Tags: