ಪಡುಬಿದ್ರಿ : ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನ
Thumbnail
ಪಡುಬಿದ್ರಿ : ಕಾಲೇಜು ‌ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ, ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡುತ್ತಿದ್ದಾರೆ. ಪೋಷಕರ ಕನಸುಗಳನ್ನು ನನಸುಗೊಳಿಸಲು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕು. ಇಂತಹ ಸಮಾಜ ಘಾತುಕ ಮಾದಕ ವಸ್ತುಗಳಿಗೆ ಆಕರ್ಷಿತರಾಗಬಾರದು‌‌. ಅಪರಾಧ ಕೃತ್ಯಗಳಿಗೆ ಬಲಿಯಾಗದೇ ದೇಶದ ಉತ್ತಮ ಪ್ರಜೆಯಾಗಿ ಬಾಳಿ ಎಂದು ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಪ್ರಸನ್ನ ಪಿ.ಎಸ್. ಹೇಳಿದರು. ಅವರು ಪಡುಬಿದ್ರಿ ರೋಟರಿ ‌ಕ್ಲಬ್ ಹಾಗು ಪಡುಬಿದ್ರಿ ಪೋಲಿಸ್ ಠಾಣೆ ವತಿಯಿಂದ ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಾಲೇಜು ಸಭಾಂಗಣದಲ್ಲಿ ನಡೆದ ಡ್ರಗ್ಸ್ ವಿರೋಧಿ ‌ಜಾಗೃತಿ ಅಭಿಯಾನ ಕಾರ್ಯಕ್ರಮಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ವಹಿಸಿದ್ದರು. ಇನ್ನರ್ ವೀಲ್ ಅಧ್ಯಕ್ಷೆ ನಮೃತಾ ಮಹೇಶ್, ಕಾಲೇಜು ಪ್ರಭಾರ ಪ್ರಾಂಶುಪಾಲೆ ಹರ್ಷದ್ ಭಾನು, ಹಿರಿಯ ಶಿಕ್ಷಕಿ ಗೀತಾ ಶೆಟ್ಟಿ, ರೋಟರಿ ನಿಕಟ ಪೂರ್ವ ಅಧ್ಯಕ್ಷೆ ಗೀತಾ ಅರುಣ್, ನಿಯೋಜಿತ ಅಧ್ಯಕ್ಷೆ ತಸ್ನೀನ್ ಅರಾ, ಕೋಶಾಧಿಕಾರಿ ಸುನಿಲ್ ಕುಮಾರ್, ಪೋಲಿಸ್ ಸಿಬ್ಬಂದಿ ಹೇಮರಾಜ್ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಮೋಹನ್ ಕರ್ಕೇರ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಪವನ್ ಸಾಲ್ಯಾನ್ ವಂದಿಸಿದರು.
24 Jun 2024, 06:10 PM
Category: Kaup
Tags: