ಪಡುಬಿದ್ರಿ : ಗಣಪತಿ ಪ್ರೌಢಶಾಲೆ ಮತ್ತು ಎಸ್ ಬಿ ವಿ ಪಿ ಹಿ. ಪ್ರಾ. ಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ ಕಾರ್ಯಕ್ರಮ
Thumbnail
ಪಡುಬಿದ್ರಿ : ಇಲ್ಲಿನ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ಸ್ಥಾಪಕರಾದ ಶ್ರೀ ವಿಬುಧೇಶತೀರ್ಥ ಶ್ರೀಪಾದರ ಸಂಸ್ಮರಣೆ ಮತ್ತು ಗುರುವಂದನ ಕಾರ್ಯಕ್ರಮವನ್ನು ಆಚರಿಸಲಾಯಿತು. ಅತಿಥಿಯಾಗಿ ಆಗಮಿಸಿದ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ನಾರಾಯಣ ಹೆಬ್ಬಾರರು ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ವಿಬುಧೇಶತೀರ್ಥರ ಕೊಡುಗೆ ಅನನ್ಯವಾದುದು. ಶಿಸ್ತುಬದ್ಧವಾದ, ದೇಶಪ್ರೇಮವನ್ನು ಬೆಳೆಸುವ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯವೆಂದು ಅವರು ಭಾವಿಸಿದ್ದರು ಎಂದು ನುಡಿದರು. ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗಳ ಸ್ಥಾಪಕರಾದ ಶ್ರೀ ವಿಬುಧೇಶತೀರ್ಥರ ಜೀವನ ಸಾಧನೆಗಳನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಮುಖ್ಯ ಅಭ್ಯಾಗತರು, ಅಧ್ಯಾಪಕರು, ವಿಧ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ನಿಕಟಪೂರ್ವ ಕಾರ್ಯದರ್ಶಿಗಳಾದ ರಾಘವೇಂದ್ರ ನಾವುಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ನಾರಾಯಣ ಹೆಬ್ಬಾರರನ್ನು ಗೌರವಿಸಿ, ಸಮ್ಮಾನಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಅನುರಾಧಾ. ಪಿ.ಎಸ್. ಸ್ವಾಗತಿಸಿದರು. ಅಧ್ಯಾಪಕ ಡಾ. ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಅಶೋಕ ಕೆ. ವಂದಿಸಿದರು.
05 Jul 2024, 06:16 PM
Category: Kaup
Tags: