ಪಡುಬಿದ್ರಿ : ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ವತಿಯಿಂದ ಪ್ರಕಾಶಾಭಿನಂದನೆ ಕಾರ್ಯಕ್ರಮ
Thumbnail
ಪಡುಬಿದ್ರಿ : ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಪಡುಬಿದ್ರಿ ವತಿಯಿಂದ "ಪ್ರಕಾಶಾಭಿನಂದನೆ" ಕಾರ್ಯಕ್ರಮ ರವಿವಾರ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ನಾವಡ, ಉಪಾಧ್ಯಕ್ಷರಾದ ರವೀಂದ್ರನಾಥ ಜಿ ಹೆಗ್ಡೆ, ಅರ್ಚಕರಾದ ಪದ್ಮನಾಭ ಭಟ್, ಗುರುರಾಜ್ ಭಟ್, ವನದುರ್ಗ ಟ್ರಸ್ಟ್ ಅಧ್ಯಕ್ಷರಾದ ಪದ್ಮನಾಭ ಕೋರ್ನಯ, ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅಶೋಕ್ ಕೋಟೆಕಾರ್, ಮುಕ್ತೇಸರರಾದ ಭವಾನಿ ಶಂಕರ್ ಹೆಗ್ಡೆ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಸ್ವರ್ಣ ಗದ್ದುಗೆ ಸಮಿತಿಯ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
07 Jul 2024, 05:23 PM
Category: Kaup
Tags: