ಮೂಡಬೆಟ್ಟು : ಉಸಿರಿಗಾಗಿ ಹಸಿರು ಕಾರ್ಯಕ್ರಮ
ಕಟಪಾಡಿ : ಉಸಿರಿಗಾಗಿ ಹಸಿರು ಸಂಘಟನೆ ಆಯೋಜಿಸುವ "ಉಸಿರಿಗಾಗಿ ಹಸಿರು" ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರವಿವಾರ ನಡೆಯಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ, ಸುಜಲ ಪೂಜಾರಿ, ಪವಿತ್ರ ಶೆಟ್ಟಿ, ಕವಿತಾ ಸುವರ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಕ್ತಿ ಕೇಂದ್ರ ಪ್ರಮುಖ್ ನಿತಿನ್ ವಿ ಶೇರಿಗಾರ್, ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಡಾ. ನಾನಾಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನ ಸದಸ್ಯರಾದ ಸಂತೋಷ್ ಎಮ್ ಶೆಟ್ಟಿಗಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
