ಜುಲೈ 9 (ನಾಳೆ) : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Thumbnail
ಉಡುಪಿ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಕೃತಕ‌ ನೆರೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ನೀಡಲಾಗಿಲ್ಲ.
08 Jul 2024, 06:20 PM
Category: Kaup
Tags: