ಕಾಪು : ಸರಕಾರಿ ಪದವಿಪೂರ್ವ ಕಾಲೇಜು, ಪೊಲಿಪು - ವನಮಹೋತ್ಸವ ಕಾರ್ಯಕ್ರಮ
Thumbnail
ಕಾಪು : ಸರಕಾರಿ ಪದವಿಪೂರ್ವ ಕಾಲೇಜು, ಪೊಲಿಪು, ಕಾಪು ಇದರ ಸಸ್ಯಶ್ಯಾಮಲ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಗಿಡ ನೆಟ್ಟು, ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜುಲೈ 10ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನದಾಸ ಶೆಟ್ಟಿಯವರು ಗಿಡ ನೆಟ್ಟು ಮಾಹಿತಿ ನೀಡುವುದರ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶಿವಲಿಂಗಪ್ಪ, ಹಿರಿಯ ಉಪನ್ಯಾಸಕ ಸುಧಾಕರ್ ಎಂ. ಏ, ಗಸ್ತು ಅರಣ್ಯ ಪಾಲಕ ಮಂಜುನಾಥ ಹಾಗೂ ಉಪನ್ಯಾಸಕರು , ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
11 Jul 2024, 07:02 AM
Category: Kaup
Tags: