ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ ಉದ್ಘಾಟನೆ
Thumbnail
ಕಾಪು : 13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿಯನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸುಮತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪ್ರಕಾಶ್, ಬ್ರಹ್ಮಾವರ ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ದೂಪದಕಟ್ಟೆ ಸಿ.ಆರ್.ಪಿ ಶಾಂತಾ, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಹಾಗೂ ಗುತ್ತಿಗೆದಾರರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.
Additional image
12 Jul 2024, 03:04 PM
Category: Kaup
Tags: