ಜುಲೈ 14 : ಹೆಜಮಾಡಿಯಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
Thumbnail
ಹೆಜಮಾಡಿ : ದ್ವಿತೀಯ ಬಾರಿಗೆ ಕರ್ನಾಟಕ ಸರಕಾರದ ವಿಧಾನಪರಿಷತ್ ಸದಸ್ಯರಾಗಿ ಅಯ್ಕೆಯಾದ ಐವನ್ ಡಿಸೋಜರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 14, ಆದಿತ್ಯವಾರ ಸಂಜೆ 4 ಗಂಟೆಗೆ ಹೆಜಮಾಡಿ ನಾರಾಯಣಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಜಮಾಡಿ ಹಾಗು ಆಸುಪಾಸಿನ ಗ್ರಾಮಗಳ ಸಾರ್ವಜನಿಕರು ಹಾಗು ಸಂಘ ಸಂಸ್ಥೆಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಪು ವಿಧಾನ ಸಭಾ ಕ್ಷೇತ್ರ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಇನ್ನಿತರರು ಭಾಗವಹಿಸಲಿದ್ದಾರೆಂದು ಸಾರ್ವಜನಿಕ ಅಭಿನಂದನಾ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
12 Jul 2024, 03:31 PM
Category: Kaup
Tags: