ಕಟಪಾಡಿ : ಕಾರುಗಳ ನಡುವೆ ಸರಣಿ ಅಪಘಾತ
Thumbnail
ಕಟಪಾಡಿ : ಉಡುಪಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕರ್ತವ್ಯ ನಿರತ ಪೊಲೀಸ್ ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಉಡುಪಿಯಿಂದ ಬರುತ್ತಿದ್ದ ವಾಹನಗಳನ್ನು ಕಟಪಾಡಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಕಾರಣಕ್ಕಾಗಿ ನಿಲ್ಲಿಸಿದ್ದು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಅದರ ಎದುರು ನಿಂತಿದ್ದ 2 ಕಾರುಗಳಿಗೆ ಢಿಕ್ಕಿ ಹೊಡೆದಿದೆ. ಆ ಎರಡೂ ಕಾರುಗಳು ಮುಂದೆ ಚಲಿಸಿ, ಸಂಚಾರ ನಿಯಂತ್ರಿಸಲು ನಿಂತಿದ್ದ ಪೊಲೀಸ್ ಸಿಬಂದಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಟಪಾಡಿ ಹೊರ ಠಾಣಾ ಸಿಬಂದಿಯೋರ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ಕು ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
17 Jul 2024, 11:44 AM
Category: Kaup
Tags: