ಭಾರತ ಸ್ಕೌಟ್ಸ್, ಗೈಡ್ಸ್ ಸ್ಥಳೀಯ ಸಂಸ್ಥೆ ಕಲ್ಯಾಣಪುರ - ವಾರ್ಷಿಕ ಮಹಾಸಭೆ, ಪುನಶ್ಚೇತನ ಕಾರ್ಯಾಗಾರ
Thumbnail
ಉಡುಪಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಲ್ಯಾಣಪುರ ಇದರ ವಾರ್ಷಿಕ ಮಹಾಸಭೆ ಮತ್ತು ಪುನಶ್ಚೇತನ ಕಾರ್ಯಾಗಾರ ಜರಗಿತು. ಜಿಲ್ಲಾ ಮುಖ್ಯ ಆಯುಕ್ತರಾಗಿ ಆಯ್ಕೆಯಾದ ಇಂದ್ರಾಳಿ ಜಯಕರ ಶೆಟ್ಟಿಯವರು ಮಾತನಾಡಿ, ಶಿಸ್ತು, ತಾಳ್ಮೆ, ಸೇವೆ ಹಾಗೂ ಎಲ್ಲಾ ದಳ ನಾಯಕರ ಸಹಕಾರವಿದ್ದರೆ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯನ್ನು ಉತ್ತುಂಗಕ್ಕೆ ಏರಿಸಲು ಹಾಗೂ ಮಾದರಿ ಜಿಲ್ಲೆಯನ್ನಾಗಿ ಮಾಡಲು ನಿಮ್ಮೆಲ್ಲರ ಸಹಕಾರದಿಂದ ಸಾಧ್ಯ ಎಂದು ತಿಳಿಸಿದರು. ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಅಲನ್ ಲುವಿಸ್ ರವರು ವಹಿಸಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಫ್ಲೋರಿನ ಡಿಸಿಲ್ವ ವಾರ್ಷಿಕ ವರದಿ , ನಡಾವಳಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಜಿಲ್ಲಾ ಗೈಡ್ ಆಯುಕ್ತ ಜ್ಯೋತಿ ಜೆ ಪೈ. ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಡಾ.ಜಯರಾಮ್ ಶೆಟ್ಟಿ ಹಾಗೂ ಖಜಾಂಚಿ ವಿಜಯ ಮಾಯಾಡಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆಯಾದ ಸುಮನ ಶೇಖರ್ ಜಿಲ್ಲಾ ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ, ರಾಜ್ಯ ಸಂಸ್ಥೆ ನೀಡಿರುವ ವಾರ್ಷಿಕ ಯೋಜನಾ ಪುಸ್ತಕ ಹಸ್ತಾಂತರಿಸಿ ಅದರ ಬಗ್ಗೆ ವಿವರಿಸಿದರು. ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರವನ್ನು ಜಿಲ್ಲಾ ಕಾರ್ಯದರ್ಶಿ ಆನಂದ ಬಿ ಅಡಿಗ ನೆರವೇರಿಸಿದರು. ಸತ್ಯಾವತಿ ಸ್ವಾಗತಿಸಿದರು. ಕಬ್ ಮಾಸ್ಟರ್ ಶ್ರೀಪಾದ ಕಾರ್ಯಕ್ರಮ ನಿರ್ವಹಿಸಿದರು.
Additional image
18 Jul 2024, 07:40 PM
Category: Kaup
Tags: