ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ : ಶಾಸಕ ಯಶ್ ಪಾಲ್ ಸುವರ್ಣ ಚಾಲನೆ
Thumbnail
ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬೆಳಕಿನ ಬಾಗಿಲು ಕನ್ನಡ ಶಾಲೆ~ಉಳಿಸಲು ಬೇಕು ಮಕ್ಕಳ ಲೀಲೆ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ ಜನಪ್ರಿಯ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲಿನ ಆವರಣದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿ ಕಸಾಪ ಉಡುಪಿ ತಾಲೂಕು ಘಟಕ ನಡೆಸುತ್ತಿರುವ ಅಭಿಯಾನ ಅತ್ಯಂತ ಮಹತ್ವದ್ದಾಗಿದೆ ಮತ್ತು ಶ್ಲಾಘನೀಯ ಕೆಲಸ ಎಂದರು. ಶಾಸಕರ ನೆಲೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯಿತ್ತರು. ತಾಲೂಕು ಘಟಕದ ಮಾಜಿ ಅಧ್ಯಕ್ಷ ಡಾ. ಗಣನಾಥ್ ಎಕ್ಕಾರು ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್ , ಮಾರುತಿ, ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ಡಾ. ಎಲ್ಲಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಲೀಲಾ ಭಟ್ ಪ್ರಾಂಶುಪಾಲರು, ಸರಕಾರಿ ಪದವಿ ಪೂರ್ವ ಕಾಲೇಜು, ಕಿದಿಯೂರು ಹೋಟೆಲ್ ನ ಜಿತೇಶ್ ಕಿದಿಯೂರು, ಕಸಾಪ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸದಸ್ಯರಾದ ವಸಂತ್, ಈರಣ್ಣ ಕುರುವತ್ತಿ ಗೌಡ ಮೊದಲಾದವರು ಉಪಸ್ಥಿತರಿದ್ದರು.
20 Jul 2024, 07:22 PM
Category: Kaup
Tags: