ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಭೇಟಿ
ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ರವಿವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ 478 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜ್ಯದ 3,100 ಕಿ.ಮೀ. ಕರಾವಳಿ ತೀರದಲ್ಲಿ ಉಡುಪಿ ಜಲ್ಲೆಯಲ್ಲಿಯೇ ಹೆಚ್ಚು ಭಾಗವಿದೆ. ಕಡಲ್ಕೊರೆತಕ್ಕೆ ತೀರದಲ್ಲಿ ಪ್ರಸ್ತುತ ಹಾಕಲಾಗುತ್ತಿರುವ ಕಲ್ಲುಗಳು ತಾತ್ಕಾಲಿಕ ಪರಿಹಾರವಾಗಿದ್ದು, ತಡೆಗೋಡೆ ನಿರ್ಮಾಣವೊಂದೇ ಶಾಶ್ವತ ಪರಿಹಾರ. ಮುಂಬಯಿ, ಗುಜರಾತ್ ಮಾದರಿಯ ತಡೆಗೋಡೆ ನಿರ್ಮಾಣವಾಗಬೇಕಿದೆ. ಇದು ಕೇಂದ್ರ ಮತ್ತು ರಾಜ್ಯ ಸರಕಾರ ಎರಡು ಸೇರಿ ಮಾಡಬೇಕಾಗಿದೆ. ಅನುದಾನದ ವಿಷಯದಲ್ಲಿ ಬೇರೊಬ್ಬರ ಮೇಲೆ ಆರೋಪ ಮಾಡಲ್ಲ. ನನ್ನ ಅವಧಿಯಲ್ಲಿಯೇ ಈ ಕಾರ್ಯ ಆಗಲು ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭ ಸ್ಥಳೀಯರು ಕಡಲ್ಕೊರೆತ ಸಮಸ್ಯೆ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರು.
ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಸಿಸ್ಟೆಂಟ್ ಕಮಿಷನರ್ ರಶ್ಮಿ, ಕಾಪು ತಹಶಿಲ್ದಾರ್ ಡಾ. ಪ್ರತಿಭ ಆರ್., ಕಾಪು ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿ' ಸಿಲ್ವ,
ಇಲಾಖಾ ಆಧಿಕಾರಿಗಳು ಉಪಸ್ಥಿತರಿದ್ದರು.
